ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ANSSIRDPR

ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರದ ತರಬೇತಿಯ ಅಂಗ ಸಂಸ್ಥೆಯಾಗಿ ೧೯೮೯ರಿಂದ ಪ್ರಾರಂಭಗೊಂಡು, ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಅನುದಾನದಿಂದ ತರಬೇತಿ ಕಾರ್ಯಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಸಂಸ್ಥೆಯಲ್ಲಿ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್‌ಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿ/ ನೌಕರರುಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾಮರ್ಥ್ಯಾಭಿವೃದ್ಧಿಗೆ ಸಂಬಧಿಸಿದಂತೆ ತರಬೇತಿ ನೀಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ. 

ಈ ಸಂಸ್ಥೆಯ ಪ್ರಾರಂಭದಿಂದಲೂ ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ಸಂಸ್ಥೆಯನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡುವ ಬಗ್ಗೆ ತುರ್ತು ಕ್ರಮವಹಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುತ್ತಾ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು “ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ”ಯನ್ನು ಸರ್ಕಾರದ ಆದೇಶ ಸಂಖ್ಯೆ : ಗ್ರಾಅಪ/೨೨/ತಾಪಸ ೨೦೧೩, ಬೆಂಗಳೂರು ದಿನಾಂಕ: ೧೦.೦೬.೨೦೧೫ರಂತೆ ಸ್ವಾಯತ್ತ ಸಂಸ್ಥೆಯನ್ನಾಗಿ ಮಾರ್ಪಡಿಸಿ ಆದೇಶಿಸಿದೆ. ಸದರಿ ಆದೇಶದಂತೆ, ಸಂಸ್ಥೆಯನ್ನು ದಿನಾಂಕ: ೦೪.೦೭.೨೦೧೬ರಂದು ಕರ್ನಾಟಕ ಸಂಘಗಳ ನೊಂದಣಿ ಕಾಯ್ದೆ ೧೯೬೦ ರನ್ವಯ (೧೯೬೦ನೇ ಇಸ್ಟಿ ೧೭ನೇ ಕ್ರಮಾಂಕದ ಕರ್ನಾಟಕ ಅಧಿನಿಯಮ) ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಂಘಗಳ ಜಿಲ್ಲಾನೊಂದಾಣಾಧಿಕಾರಿಗಳ ಕಛೇರಿ, ಮೈಸೂರು ಇಲ್ಲಿ ಸಂಸ್ಧೆಯನ್ನು ನೋಂದಾಯಿಸಲಾಗಿರುತ್ತದೆ.
ಪ್ರಸ್ತುತ ಸಂಸ್ಥೆಯ ಆಡಳಿತ ಮಂಡಳಿಯನ್ನು ಕರ್ನಾಟಕ ಸರ್ಕಾರದ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳನ್ನೊಳಗೊಂಡಂತೆ ಆಯ್ದ ಇತರೆ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಎನ್.ಐ.ಆರ್.ಡಿ. ಪ್ರತಿನಿಧಿ, ಸಂಶೋಧನಾ ಸಂಸ್ಥೆಯ ಪ್ರತಿನಿಧಿ, ಮೂರು ಹಂತದ ಪಂಚಾಯತ್ ರಾಜ್ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪರಿಣಿತರು ಇದರ ಸದಸ್ಯರಾಗಿರುತ್ತಾರೆ. ಸಂಸ್ಥೆಯ ದೈನಂದಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ಕಾರ್ಯಕಾರಿ ಸಮಿತಿಯನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ.

ಇತ್ತೀಚಿನ ನವೀಕರಣ​ : 20-04-2021 05:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080